ವಿದ್ಯಾರ್ಥಿನಿಯರ ಜೊತೆ ಕುಣಿದ ರಾಹುಲ್ ಗಾಂಧಿ – ವಿಡಿಯೋ ವೈರಲ್!

ಚೆನ್ನೈ: ಮೀನುಗಾರರ ಜೊತೆ ಸಮುದ್ರಕ್ಕೆ ಜಿಗಿದು ಏಂಜಾಯ್ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇದೀಗ ವೇದಿಕೆ ಮೇಲೆ ವಿದ್ಯಾರ್ಥಿಗಳ ಜೊತೆ ಕುಣಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಚುನಾವಣೆ ಸಂಬಂಧ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಸೇಂಟ್ ಜೋಸೆಫ್ ಹೈಯರ್ ಸೆಕೆಂಡರಿ ಸ್ಕೂಲ್ ಮುಲಾಗುಮುದಬ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿನಿಯರ ಜೊತೆ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು ರಾಹುಲ್ ಗೆ ಸಾಥ್ ನೀಡಿದರು. 

ತಮಿಳುನಾಡು ಮತ್ತು ಕೇರಳದಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎರಡು ರಾಜ್ಯಗಳಲ್ಲಿ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಈ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!