ಬೈಂದೂರು: ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಕೃಷಿಕ ಮೃತ್ಯು
ಬೈಂದೂರು: ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಕೃಷಿಕ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಸುರೇಶ ಪೂಜಾರಿ (51) ಮೃತಪಟ್ಟವರು.
ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಫೆ.28 ರಂದು, ಕೃಷಿ ಕೆಲಸಕ್ಕೆ ಹೋಗಿದ್ದವರು ಸಂಜೆ ಆದರೂ ಮನೆಗೆ ಬಾರದ ಕಾರಣ ಮನೆ ಮಂದಿ ಹುಡುಕಾಡಿದ್ದಾರೆ. ಆದರೆ ಎಷ್ಟು ಹುಡುಕಾಡಿದರೂ ಎಲ್ಲಿಯೂ ಅವರ ಪತ್ತೆಯಾಗಿರಲಿಲ್ಲ.
ಈ ನಡುವೆ ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಕಂಬದಕೋಣೆ ಗ್ರಾಮದ ಎಡಮಾವಿನ ಹೊಳೆ ತೀರದಲ್ಲಿ ಸುರೇಶ ಪೂಜಾರಿ ಅವರ ಮೃತದೇಹ ಪತ್ತೆಯಾಗಿದೆ. ಫೆ.28 ರಂದು ರಂದು ಸಂಜೆ ಸುರೇಶ ಪೂಜಾರಿ ಯವರು ಕೃಷಿ ಕೆಲಸ ಮುಗಿಸಿ ಮನೆಗೆ ಬರಲು ಎಡಮಾವಿನ ಹೊಳೆಯ ದಡದಲ್ಲಿ ನಡೆದುಕೊಂಡು ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ