ಮಂಗಳೂರು: ರೂ16.52 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ-ಮುರುಡೇಶ್ವರದ ವ್ಯಕ್ತಿಯ ಬಂಧನ
ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿರುವ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ನಡೆದಿದೆ.
ಮುರುಡೇಶ್ವರ ಮೂಲದ ಮೊಹಮ್ಮದ್ ಅವಾನ್ ಬಂಧಿತ ಆರೋಪಿ. ಇಂದು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ, ಆರೋಪಿಯ ಟ್ರಾಲಿ ಬ್ಯಾಗ್ನಲ್ಲಿ ಚಿನ್ನವನ್ನು ಮರೆ ಮಾಚಿ ಕಳ್ಳಸಾಗಣೆ ಮಾಡುತ್ತಿದ್ದುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯಿಂದ ರೂ .16,52,000 ಮೌಲ್ಯದ 350.00 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ