ನೋಟು ಅಮಾನ್ಯೀಕರಣದಿಂದ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ನವದೆಹಲಿ: ನೋಟು ಅಮಾನ್ಯೀಕರಣದ ನಿರ್ಧಾರದ ಕಾರಣ ನಿರುದ್ಯೋಗ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಳಿದ್ದಾರೆ.

ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಡೆವಲಪ್ಮೆಂಟ್ ಸ್ಟಡೀಸ್ ಆಯೋಜಿಸಿರುವ ಅಭಿವೃದ್ಧಿ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 2016 ರಲ್ಲಿ ಪ್ರಧಾನಿ ಮೋದಿ ಅವರ ಸರ್ಕಾರ ತೆಗೆದುಕೊಂಡ “ಕೆಟ್ಟದಾಗಿ ಪರಿಗಣಿಸಲಾದ ನೋಟು ಅಮಾನ್ಯೀಕರಣ ನಿರ್ಧಾರ”ದ  ನಂತರ ಅದರ ಅನೌಪಚಾರಿಕ ವಲಯವು ಅಸ್ತವ್ಯಸ್ತವಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ರಾಜ್ಯಗಳೊಂದಿಗೆ ಸರಿಯಾದ ರೀತಿಯಲ್ಲಿ ಕೇಂದ್ರ ಸರ್ಕಾರ ಸಮಾಲೋಚನೆಯನ್ನು ಮಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರವನ್ನು ಟೀಕೆ ಮಾಡಿರುವ ಅವರು, ಸಣ್ಣ ಮತ್ತು ಮಧ್ಯಮ ವಲಯದ ಮೇಲೆ ಪರಿಣಾಮ ಬೀರಬಹುದಾಗ ಭಾರತೀಯ ರಿಸರ್ವ್ ಬ್ಯಾಂಕಿನ ತಾತ್ಕಾಲಿಕ ಕ್ರಮಗಳು ನಮ್ಮನ್ನು ಕುರುಡಾಗಿಸುವುದಿಲ್ಲ ಎಂದಿದ್ದಾರೆ. 

Leave a Reply

Your email address will not be published. Required fields are marked *

error: Content is protected !!