ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಿ: ಸುಪ್ರೀಂ ಕೋರ್ಟ್
ನವದೆಹಲಿ: ಪೊಲೀಸ್ ಠಾಣೆಗಳಲ್ಲಿ ಕಿರುಕುಳ ತಪ್ಪಿಸುವ ಸಲುವಾಗಿ ದೇಶದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ, ಕ್ಯಾಮರಾಗಳನ್ನು ಅಳವಡಿಸುವಂತೆ ಎಲ್ಲಾ ರಾಜ್ಯಗಳಿಗೂ ನಿರ್ಧಿಷ್ಟ ಗಡುವು ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಪೊಲೀಸ್ ಕಸ್ಟಡಿಯಲ್ಲಿ ಕಿರುಕುಳ ನೀಡಲಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ಕೆ.ಎಂ.ಜೋಸೆಫ್ ಮತ್ತು ಅನಿರುದ್ಧ ಬೋಸ್ ಅವರ ವಿಭಾಗೀಯ ಪೀಠವು ಈ ಕುರಿತಂತೆ ಆದೇಶ ನೀಡಿದೆ. ರಾಜ್ಯದ ಎಲ್ಲಾ ರಾಜ್ಯಗಳಿಗೆ ಪೊಲೀಸ್ ಠಾಣೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧಿಷ್ಟ ಗಡುವು ನೀಡಿರುವ ಸುಪ್ರೀಂ ಕೋರ್ಟ್, ದೊಡ್ಡ ರಾಜ್ಯಗಳಾದ ಉತ್ತರ ಪ್ರದೇಶದಲ್ಲಿ 9 ತಿಂಗಳು ಹಾಗೂ ಮಧ್ಯಪ್ರದೇಶದಲ್ಲಿ 8 ತಿಂಗಳಲ್ಲಿ ರಾಜ್ಯಗಳ ಎಲ್ಲಾ ಪೊಲೀಸ್ ಠಾಣೆಯಲ್ಲಿ ನೈಟ್ ವಿಷನ್ ಮತ್ತು ಆಡಿಯೋ ವೀಡಿಯೋ ಎರಡನ್ನೂ ದಾಖಲಿಸುವ ಸಿಸಿಟಿವಿ ಕ್ಯಾಮರಾ ಅಳವಡಿಸಲು ಕಾಲಾವಕಾಶ ನೀಡಿದೆ.
ಇನ್ನು ಕರ್ನಾಟಕವೂ ಸೇರಿದಂತೆ ಬಹುತೇಕ ರಾಜ್ಯಗಳು ಒಂದು ತಿಂಗಳೊಳಗೆ ಬಜೆಟ್’ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಕೆಗಾಗಿ ಹಣಕಾಸು ಮೀಸಲಿಟ್ಟು, 4 ತಿಂಗಳೊಳಗೆ ಸಿಸಿಟಿವಿ ಅಳವಡಿಕೆ ಕಾರ್ಯ ಮುಕ್ತಾಯಗೊಳಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.