ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಪದೇ-ಪದೇ ಸೋಲುವುದರಿಂದ ಕಾಂಗ್ರೆಸ್ಸಿಗರಿಗೆ ಬುದ್ಧಿ ಭ್ರಮಣೆಯಾಗಿದೆ ಹಾಗಾಗಿ ರಾಹುಲ್ ಗಾಂಧಿಗೆ ಚಿಕಿತ್ಸೆಯ ಅಗತ್ಯವಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬ್ರಿಟಿಷರನ್ನು ಓಡಿಸಿದವರಿಗೆ ಮೋದಿಯನ್ನು ಓಡಿಸುವುದು ಕಷ್ಟವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಚಿಕ್ಕ ಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತಿದೆ. ಕಾಂಗ್ರೆಸ್ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷವಾಗಿಯೂ ಉಳಿದಿಲ್ಲ. 4 ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ಸಿಗೆ ಸೋಲು ಕಟ್ಟಿಟ್ಟ ಬುತ್ತಿ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ. ವಂಶಾಡಳಿತ, ದುರಾಡಳಿತ, ಭ್ರಷ್ಟಾಚಾರದಿಂದ ನೀವು ಜನರಿಂದಲೇ ನಾಶವಾಗಿದ್ದೀರಾ. ಮತ್ತೆ ಸರ್ವನಾಶವಾಗುತ್ತಿರಿ ಎಂದರು.

ಈ ವೇಳೆ ಮಾತು ಮುಂದುವರೆಸಿದ ಅವರು, ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಾನಾ ರೀತಿಯ ನಾಟಕವಾಡುತ್ತಾರೆ. ಪಾರ್ಲಿಮೆಂಟ್ ಚುನಾವಣೆ ನಡೆದಾಗ ವಿದೇಶಕ್ಕೆ ಓಡಿ ಹೋಗುತ್ತಾರೆ. ಈಗ ಚುನಾವಣೆಗಾಗಿ ನೀರಿಗಿಳಿಯೋದು, ಹಾಡೋದು, ಡ್ಯಾನ್ಸ್ ಮಾಡುತ್ತಾರೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!