ರಾಸಲೀಲೆ ಸಿಡಿ ಬಯಲು ಪ್ರಕರಣ: ಸಚಿವ ಜಾರಕಿಹೊಳಿಗೆ ಸಿಎಂರಿಂದ ತುರ್ತು ಬುಲಾವ್
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಬಯಲು ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿ ನಡೆಯುತ್ತಿರುವ ಅನೇಕ ಬೆಳವಣಿಗೆಗಳ ನಡುವೆ, ಸಚಿವ ಜಾರಕಿಹೊಳಿಗೆ ಸಿಎಂ ರಿಂದ ತುರ್ತು ಬುಲಾವ್ ಬಂದಿದೆಯಂತೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಆಗ್ರಹಿಸಿವೆ. ಇದರ ನಡುವೆ ಹೈಕಮಾಂಡ್ ನಲ್ಲಿ ಚರ್ಚೆ ನಡೆದಿದ್ದು ಇಂದೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇತ್ತ ರಾಜ್ಯದ ಲೋಕಸಭೆ ಹಾಗೂ 3 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿವಾದದಲ್ಲಿ ಸಿಲುಕಿಕೊಂಡಿರುವುದು ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ಈ ವಿಚಾರವಾಗಿ ಬಿಜೆಪಿ ಹೈಕಮಾಂಡ್ ನಲ್ಲೂ ಚರ್ಚೆ ನಡೆದಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ.