ಅಶ್ಲೀಲ ವಿಡಿಯೋ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ಧಿ ವರದಿಯಾಗಿದೆ.
ವಿಚಾರಕ್ಕೆ ಸಂಬಂಧಿಸಿ, ನಾನು ಯಾವ ತಪ್ಪನ್ನು ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದಿದ್ದ ಜಾರಕಿಹೊಳಿ ಅವರು ಇದೀಗ ನೈತಿಕ ಹೊಣೆ ಹೊತ್ತು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಈ ವಿಡಿಯೋ ವಿಚಾರವಾಗಿ ಸಚಿವರು ರಾಜಿನಾಮೆ ನೀಡಬೇಕು ಎಂಬ ಒತ್ತಾಯಗಳು ಕೇಳಿಬಂದಿದ್ದವು. ಇದೀಗ ರಾಜಿನಾಮೆ ನೀಡುವುದಿಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ ಅವರು ಧಿಡೀರ್ ಬೆಳವಣಿಗೆ ಎಂಬಂತೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.