ವಿಜಯಪುರ: ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ,ಚಾಲಕನ ಸಾವು

ವಿಜಯಪುರ: ಲಾರಿ ಹಾಗೂ ಕ್ಯಾಂಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಚಾಲಕನೋರ್ವ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ.

ಘಟನೆಯಲ್ಲಿ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆ ಬಾರ್ಸಿ ತಾಲೂಕಿನ ಪಾನಗಾವ್ ನಿವಾಸಿ ಕ್ಯಾಂಟರ್ ಚಾಲಕ ವಿಕಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕ, ಕ್ಲಿನರ್‌ಗೆ ಗಾಯಗಳಾಗಿದ್ದು,ಅವರನ್ನು ಕೊಲ್ಹಾರ ಸರ್ಕಾರಿ ಆಸ್ಪತ್ತೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!