ಕುಂದಾಪುರ: ಪಾಳು ಬಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ಕುಂದಾಪುರ: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ  ಜಪ್ತಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಮಡಿವಾಳ (42) ಆತ್ಮಹತ್ಯೆ ಮಾಡಿಕೊಂಡವರು.

ಇವರು ಮಾ.3 ರಂದು ಜಪ್ತಿ ಗ್ರಾಮದ 5 ಸೆಂಟ್ಸ್ ಜನತಾ ಕಾಲೋನಿಯ ಲಕ್ಷ್ಮಣ ಮೊಗವೀರ ರವರಿಗೆ ಸೇರಿದ ಪಾಳು ಬಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!