ಎರ್ಲಪಾಡಿ: ನೀರಿನಲ್ಲಿ ಮುಳುಗಿ ಮೃತಪಟ್ಟ ನಿವೃತ್ತ ಇಸ್ರೋ ವಿಜ್ಞಾನಿ
ಕಾರ್ಕಳ: ಸ್ನಾನಕ್ಕೆಂದು ಹೋದವರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.
ಬೆಂಗಳೂರು ಬಸವನಗುಡಿಯ ನಿವೃತ್ತ ಇಸ್ರೋ ವಿಜ್ಞಾನಿ ರತ್ನಾಕರ ಎಸ್.ಸಿ (63) ಮೃತಪಟ್ಟವರು. ಇವರು ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಗೋವಿಂದೂರು ಎಂಬಲ್ಲಿರುವ ಶ್ರೀರಾಮಕೃಷ್ಣ ಆಶ್ರಮದಲ್ಲಿ ವಾಸ್ತವ್ಯ ಇದ್ದರು.
ಮಾ. 3 ರಂದು ಬೆಳಿಗ್ಗೆ ಆಶ್ರಮದ ಬದಿಯಲ್ಲಿರುವ ಸ್ವರ್ಣ ನದಿಗೆ ಸ್ನಾನಕ್ಕೆ ಹೋಗಿದ್ದರು. ಈ ವೇಳೆ, ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಂಜೆ ವೇಳೆಗೆ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.