ಬಸ್ ತಡೆದು ಚಾಲಕನಿಗೆ ಹಲ್ಲೆ: ಯುವಕ ಪೊಲೀಸ್ ವಶಕ್ಕೆ
ಮಂಗಳೂರು: ಚಲಿಸುತ್ತಿದ್ದ ಸರಕಾರಿ ಬಸ್ ತಡೆದು ಚಾಲಕನಿಗೆ ಹಲ್ಲೆ ನಡೆಸಿ ಪ್ರಕರಣಕ್ಕೆ ಸಂಬಂದಿಸಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಹಿಫ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿ.
ಇಂದು ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಬಸ್‍ನ್ನು ತಡೆದ ಯುವಕ ಸುಗಮ ರಸ್ತೆ ಸಂಚಾರಕ್ಕೆ ತಡೆಯೊಡ್ಡಿದ್ದು ಮಾತ್ರವಲ್ಲದೆ ಬಸ್ಸು ಚಾಲಕನ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಈ ಬಗ್ಗೆ ಪುತ್ತೂರು ಡಿಪೋದ ಕೆಎಸ್ ಆರ್ ಟಿಸಿ ಬಸ್ ಚಾಲಕ ರಾಜು ಗಜಕೋಶ ಪೊಲೀಸರಿಗೆ ದೂರು ನೀಡಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಡಿಪೋದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ರಾಜು ಗಜಕೋಶ ಇಂದು ಪುತ್ತೂರಿನಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ವೇಳೆ, ರಸ್ತೆಯಲ್ಲಿ ಸ್ಕೂಟರ್ ಸವಾರ ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸಿದ್ದ. ಇದನ್ನು ಪ್ರಶ್ನೆ ಮಾಡಿದ ಬಸ್ ಚಾಲಕನ ಮೇಲೆ ಬೈಕ್ ಸವಾರ ಸೋಹಿಫ್ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದಾನೆ. ಮಾತ್ರವಲ್ಲದೆ ಚಾಲಕ ರಾಜು ಗಜಕೋಶರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.