ಬ್ರಹ್ಮಾವರ: ಬೈಕಾಡಿ ಯುವತಿ ನಾಪತ್ತೆ
ಉಡುಪಿ ಮಾ.5: ಬ್ರಹ್ಮಾವರ ತಾಲೂಕು ಬೈಕಾಡಿ ಗ್ರಾಮದ ಗಾಂಧಿನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಮ್ಯಶ್ರೀ (17) ಎಂಬ ಯುವತಿಯು ಮಾರ್ಚ್ 1 ರಿಂದ ನಾಪತ್ತೆಯಾಗಿದ್ದಾರೆ.
ಚಹರೆ: 4 ಅಡಿ 7 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2561044, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಅನ್ನು ಸಂಪರ್ಕಿಸುವ0ತೆ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.