ಕೋಟ: ದೇವಸ್ಥಾನದಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ
ಕೋಟ: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟದಲ್ಲಿ ನಡೆದಿದೆ. ಚಂದ್ರ ಪೂಜಾರಿ(34) ಆತ್ಮಹತ್ಯೆ ಮಾಡಿಕೊಂಡವರು.
ಇವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ತಮ್ಮ ಖಾಯಿಲೆಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇತ್ತೀಚಿನ ದಿನಗಳಲ್ಲಿ ಸರಿಯಾಗಿ ಮಾತ್ರೆಗಳನ್ನು ಸೇವಿಸದೆ ಖಾಯಿಲೆ ಉಲ್ಬಣಗೊಂಡಿತ್ತು.
ಇವರು ಪ್ರತಿದಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಾಗೂ ಕಸ ಗುಡಿಸಲು ಹೋಗುತ್ತಿದ್ದರು. ಅದರಂತೆ, ಮಾ.7 ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿದ್ದಾರೆ. ಆದರೆ ಬಳಿಕ ತೆಕ್ಕಟ್ಟೆಯ ಮಹಾಲಿಂಗೇಶ್ವರ ದೇವಸ್ಥಾನದ ಪವಳಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.