ದೇವಸ್ಥಾನದ ಕಾಣಿಕೆ ಡಬ್ಬಿ, ಕಳವು: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಸಂಚಾಲಕನ ಬಂಧನ
ಕೊಣಾಜೆ: ದೇವಸ್ಥಾನದ ಕಾಣಿಕೆ ಡಬ್ಬಿ, ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಸಂಚಾಲಕನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಮೊಂಟೆಪದವು ನಿವಾಸಿ ತಾರನಾಥ್ ಮೋಹನ ಬಂಧಿತ ಆರೋಪಿ. ಈತ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕನಾಗಿದ್ದಾನೆ.
ಈತ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮೆನೆಯಲ್ಲಿದ್ದ ಬೈಕ್ ಕಳವು ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿ, ಸಿಸಿ ಟಿವಿಯಲ್ಲಿ ದೊರೆತ ಮಾಹಿತಿ ಆಧಾರದಲ್ಲಿ ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.