ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು
ಮಂಗಳೂರು: ನಗರದ ಆಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ.
ಕೋಟೆಕಾರ್ ಬೀರಿ ನಿವಾಸಿ ಅನೀಶ್ (20) ಮೃತಪಟ್ಟ ಯುವಕ. ಈತ ಕೆಪಿಟಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಆಸ್ಪತ್ರೆಯ ಕ್ಯಾಂಟೀನ್ ಕಟ್ಟಡವು ಅವ್ಯವಸ್ಥೆಯ ಅಗಾರವಾಗಿದ್ದು, ಅನೀಶ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಲಿಯಾಗಿದ್ದಾನೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಈ ಬಗ್ಗೆ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.