ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದಲ್ಲಿದ್ದ ಅಧಿಕಾರಿ ಮನೆಗೆ ಎಸಿಬಿ ದಾಳಿ
ಉಡುಪಿ: ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ವಡ್ಡಾರು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿಯ ಪುತ್ತೂರು ಬಳಿಯ ಇರುವ ಇವರ ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಸುಬ್ರಹ್ಮಣ್ಯ ವಡ್ಡಾರು ಅವರ ಮ್ಯೆಸೂರಿನಲ್ಲಿರುವ ಮನೆ, ಕಚೇರಿ, ಕಾರವಾರದಲ್ಲಿರುವ ಮನೆ, ಸಹಿತ ಒಟ್ಟು ನಾಲ್ಕು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರು ಆಗಿದ್ದರು. ಇದೀಗ ಇಂದು ಬೆಳಿಗ್ಗೆ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.