ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದ ಸರ್ಕಾರ ವಿರುದ್ಧ ಎನ್ಎಸ್ ಯುಐ ಆಕ್ರೋಶ
ಉಡುಪಿ: ಬಹು ದಿನಗಳ ಬೇಡಿಕೆಯಾದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ ಎಂದು ಉಡುಪಿ ಜಿಲ್ಲಾ
ಎನ್ಎಸ್ಯುಐನ ಉಪಾಧ್ಯಕ್ಷ ಮೊಹಮ್ಮದ್ ಝಮೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೊರೋನಾ ಸಂಕಷ್ಟದಿಂದ ರಾಜ್ಯ ಚೇತರಿಸಿಕೊಂಡ ಬಳಿಕ ಶಾಲಾ ಕಾಲೇಜುಗಳು ಆರಂಭಗೊಂಡಿದೆ. ಆದರೆ, ಬಡ ಹಾಗೂ ಮಾಧ್ಯಮ ವರ್ಗದ ವಿದ್ಯಾರ್ಥಿಗಳು ಶಾಲಾ ಫೀಸ್ ಕಟ್ಟುವ ಪರಿಸ್ಥಿತಿಯಲ್ಲಿ ಇಲ್ಲ. ಬಸ್ ನಲ್ಲಿ ಬರುವ ಸಾಮಥ್ರ್ಯವೂ ಇಲ್ಲ ಹಾಗೂ ಕೊರೋನಾ ಸಂಕಷ್ಟದಿಂದ ಅನೇಕ ವಿಧ್ಯಾರ್ಥಿಗಳು ಶಾಲಾ ಕಾಲೇಜ್ ಗೆ ಹೋಗುವುದಕ್ಕೊ ಕಷ್ಟವಾಗಿದೆ. ಹೀಗಿರುವಾಗ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ವಿಧ್ಯಾರ್ಥಿ ಸಂಘಟನೆ ಸರ್ಕಾರಕ್ಕೆ ಮನವಿ ಮಾಡಿತ್ತು.
ಆದರೆ, ಈ ಬಾರಿಯ ಬಜೆಟ್ ನಲ್ಲಿ ಬಹು ದಿನಗಳ ಬೇಡಿಕೆಯಾದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಬಗ್ಗೆ ಸರಕಾರ ಯಾವುದೇ ಘೋಷಣೆ ಮಾಡಿಲ್ಲ. ಈ ಮೂಲಕ ಶಾಲಾ ಕಾಲೇಜು ವಿಧ್ಯಾರ್ಥಿಗಳ ಮನವಿಗೆ ಸ್ಪಂದಿಸದೇ ಸರಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ಆದ್ದರಿಂದ ಸರಕಾರ ಈ ಕೂಡಲೇ ವಿಧ್ಯಾರ್ಥಿಗಳ ಉಚಿತ ಬಸ್ ಪಾಸ್ ನೀಡಬೇಕು. ಇಲ್ಲದಿದ್ದರೆ ಉಡುಪಿ ಜಿಲ್ಲಾದ್ಯಾಂತ ಎನ್ ಎಸ್ ಯುಐ ವತಿಯಿಂದ ಪ್ರತಿಭಟನೆಯನ್ನು ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.