ನನ್ನ ವಿರುದ್ಧ ಷಡ್ಯಂತ್ರ ಮಾಡಿದವರನ್ನು ಜೈಲಿಗೆ ಕಳುಹಿಸುತ್ತೇನೆ: ಗುಡುಗಿದ ಜಾರಕಿಹೊಳಿ
ಬೆಂಗಳೂರು: ಇದು ಶೇ. 100ರಷ್ಟು ನಕಲಿ ಸಿಡಿ. ನಾನು ಅಪರಾಧಿಯಲ್ಲ, ನಿರಪರಾಧಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ.
ರಮೇಶ್ ಜಾರಕಿಹೊಳಿಯವರು ಮಹಿಳೆಯನ್ನು ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಿ.ಡಿ ಜೊತೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಇತ್ತೀಚೆಗೆ ಕೇಸ್ ವಾಪಸ್ ಪಡೆದಿದ್ದರು.
ಇದರ ಬೆನ್ನಲ್ಲೇ, ಸುದ್ದಿಗೋಷ್ಠಿ ನಡೆಸಿರುವ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ದಯವಿಟ್ಟು ನನಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ. ಸಿ.ಡಿಗೆ ₹ 20 ಕೋಟಿ ಖರ್ಚು ಮಾಡಲಾಗಿದೆ. ಯಶವಂತಪುರ ಮತ್ತು ಹುಳಿಮಾವು ಎರಡು ಕಡೆ ಷಡ್ಯಂತ್ರ ರೂಪಿಸಲಾಗಿದೆ ಎಂದು ಹೇಳಿದ್ದಾರೆ.
ಷಡ್ಯಂತ್ರ ಮಾಡಿದರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಗುಡುಗಿದ್ದಾರೆ. ಯುವತಿಗೆ ಸಿ.ಡಿ ಬಿಡುಗಡೆ ಮಾಡಲು ₹ 5 ಕೋಟಿ, ವಿದೇಶದಲ್ಲಿ 2 ಅಪಾರ್ಟ್ ಮೆಂಟ್ ಕೊಡಿಸಿರುವ ಮಾಹಿತಿ ಇದೆ ಎಂದು ಅವರು ಹೇಳಿದ್ದಾರೆ. ಷಡ್ಯಂತ್ರ ಮಾಡಿದವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಗುಡುಗಿದ್ದಾರೆ.