ರಾಷ್ಟ್ರ ಮಟ್ಟದಲ್ಲಿ ದಾಖಲೆ ನಿರ್ಮಿಸಿದ ರೇಣುಕಾಗೆ ಸನ್ಮಾನ
ಉಡುಪಿ: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ, ಕರ್ನಾಟಕ ಎಚಿವರ್ ಬುಕ್ ಆಫ್ ರೆಕಾರ್ಡ್’ನಲ್ಲಿ ರಾಷ್ಟ್ರ ಮಟ್ಟದಲ್ಲಿ ದಾಖಲೆ ನಿರ್ಮಿಸಿರು ರೇಣುಕಾ ಅವರನ್ನು ಸಿಎಸ್ಪಿ ಪೊಲೀಸ್ ಅಧೀಕ್ಷಕ ಚೇತನ್ ಆರ್. ಐ.ಪಿ.ಎಸ್. ಅವರು ಸನ್ಮಾನ ಮಾಡಿ ಗೌರವಿಸಿದರು.
ರೇಣುಕಾ 108 ನಮಸ್ಕಾರಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಿ “ಕರ್ನಾಟಕ ಎಚಿವರ್ ಬುಕ್ ಆಫ್ ರೆಕಾರ್ಡ್”ನಲ್ಲಿ ರಾಷ್ಟ್ರ ಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೇಣುಕಾ ಅವರ ಸ್ವಗೃಹಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ರೇಣುಕಾ ಅವರಿಗೆ ಸನ್ಮಾನ ಮಾಡಿ ಗೌರವಿಸಿದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಾಗೂ ರೇಣುಕಾ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.