ಕಾಪು: ಬೈಕ್ ಡಿಕ್ಕಿ – ಅಪರಿಚಿತ ವ್ಯಕ್ತಿಯ ಸಾವು
ಕಾಪು: ಬೈಕ್ ಡಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪುವಿನ ಮೂಳೂರುವಿನಲ್ಲಿ ನಡೆದಿದೆ.
ಮಾ. 8 ರಂದು ಚಿತ್ತನ್ ಕುಮಾರ್ ಎಂಬವರು ಮೂಳೂರಿನ ನರ್ಸರಿ ಬಳಿ ಇದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತಿ ವೇಗವಾಗಿ ಬಂದ ದ್ವಿಚಕ್ರ ಸವಾರ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ವ್ಯಕ್ತಿ ರಸ್ತೆಗೆ ಬಿದ್ದಿದ್ದಾರೆ. ಕೂಡಲೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ವ್ಯಕ್ತಿಯನ್ನು ಪರೀಕ್ಷಿಸಿದ ವೈದ್ಯರು ಆತನನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮಾ.9 ರಂದು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.