ಕಡಿಯುತ್ತಿದ್ದ ಮರ ಬಿದ್ದು ಮೂವರು ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ: ಮರ ಕಡಿಯುತ್ತಿದ್ದ ವೇಳೆ ಮೂವರ ಮೇಲೆ ಮರ ಬಿದ್ದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ನಡೆದಿದೆ.
ಪಟ್ರಮೆ ಪ್ರಶಾಂತ್ (21), ಸ್ವಸ್ತಿಕ್ (23), ಸುರೇಶ್ ಮೃತ ದುರ್ಧೈವಿಗಳು. ಪಟ್ರಮೆ ಗ್ರಾಮದ ಅನಾರು ಕಾಯಿಲದ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರವನ್ನು
ಕಡಿಯುತ್ತಿದ್ದ ವೇಳೆ ಮರ ತುಂಡಾಗಿ ಬಿದ್ದಿದೆ. ಈ ವೇಳೆ ಮರದ ಅಡಿಗೆ ಸಿಲುಕಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ಕುಮಾರ್, ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.