ಶಿವಮೊಗ್ಗದಲ್ಲಿ ಸೌತ್ ಆಫ್ರಿಕಾದ ಕೋವಿಡ್-19 ವೈರಸ್ ಪತ್ತೆ
ಶಿವಮೊಗ್ಗ: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಭೀತಿ ಆರಂಭವಾದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ದುಬೈ ನಿಂದ ಬೆಂಗಳೂರಿಗೆ ವಾಪಸ್ ಆಗಿದ್ದ ವ್ಯಕ್ತಿಯಲ್ಲಿ ಸೌತ್ ಆಪ್ರಿಕಾ ವೈರಸ್ ಪತ್ತೆಯಾಗಿದೆ. ಶಿವಮೊಗ್ಗದ ಜೆಪಿ ನಗರದ ನಿವಾಸಿ 53 ವರ್ಷದ ವ್ಯಕ್ತಿಯಲ್ಲಿ ಸೌತ್ ಆಫ್ರಿಕಾ ವೈರಸ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ದುಬೈನಿಂದ ಬೆಂಗಳೂರು ಏರ್ಪೋರ್ಟ್ ನಲ್ಲಿ ಬಂದಿಳಿದ ಪ್ರಯಾಣಿಕರನ್ನು ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ಕೊಟ್ಟ ಸ್ವಾಬ್ ಅನ್ನು ಟೆಸ್ಟ್ ಗೆ ಒಳಪಡಿಸಿದಾಗ, ಶಿವಮೊಗ್ಗ ಮೂಲದ ವ್ಯಕ್ತಿಯ ಟೆಸ್ಟ್ ನಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಅ ವ್ಯಕ್ತಿಯನ್ನ 7 ದಿನ ಹೋಮ್ ಐಸೋಲೇಷನ್ ನಲ್ಲಿ ಇರಿಸಲಾಗಿತ್ತು. ಬಳಿಕ ಆತ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ರು. ಇದೀಗ ವ್ಯಕ್ತಿಗೆ ಸೋಂಕು ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಮತ್ತು ಪ್ರೈಮರಿ ಕಾಂಟ್ಯಾಕ್ಟ್ ನ್ನು ಪತ್ತೆಹಚ್ಚಲು ಆರೋಗ್ಯಾಧಿಕಾರಿಗಳು ಮುಂದಾಗಿದ್ದಾರೆ. ಸದ್ಯ ಈ ವ್ಯಕ್ತಿಯೊಂದಿಗೆ ಪ್ರೈಮರಿ ಕಾಂಟ್ಯಾಕ್ಟ್ ಹೊಂದಿದ್ದ 9 ಮಂದಿಯನ್ನು ಪತ್ತೆ ಮಾಡಲಾಗಿದೆ. ಅಲ್ಲದೆ ಸೆಕೆಂಡರಿ ಕಾಂಟ್ಯಾಕ್ಟ್ ಗಳನ್ನೂ ಸಹ ಪತ್ತೆ ಮಾಡಲಾಗಿದ್ದು, ಸೋಂಕಿತ ವ್ಯಕ್ತಿಯನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.