ಅಶ್ವತ್ ನಾರಾಯಣ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿ: ಸದಾನಂದಗೌಡ
ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ ನಾರಾಯಣ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಹರಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿ ಮಾ.11 ರ ರಾತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಷನ್ ಆಯೋಜಿಸಿದ್ದ ಮಹಾ ಶಿವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅತ್ಯುತ್ತಮ ಕರ್ತವ್ಯ ಪ್ರಜ್ಞೆ ಹಾಗೂ ಸದ್ದಿಲ್ಲದೆ ತಮ್ಮ ಪಾಡಿಗೆ ತಾವು ನಿಷ್ಠೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿರುವ ಡಾ.ಸಿ.ಎನ್.ಅಶ್ವತ್ಥನಾರಾಯಣರ ಪದವಿ ಮುಂದಿರುವ ‘ಉಪ’ ಹೋಗಿ ಆದಷ್ಟು ಬೇಗ ‘ಮುಖ್ಯಮಂತ್ರಿ’ ಎಂಬ ಪದನಾಮ ಬರುವಂತಾಗಲಿ. ಅದಕ್ಕೆ ಬೇಕಾದ ಎಲ್ಲ ಕೃಪೆ-ಚೈತನ್ಯವನ್ನು ಆ ಪರಮಶಿವ ನೀಡಲಿ ಎಂದು ಶುಭ ಹಾರೈಸಿದರು.
ಈ ವೇಳೆ ಮಾತು ಮುಂದುವರೆಸಿದ ಅವರು, ಬರೇ ಮಾತುಗಳುನ್ನು ಆಡುವ ರಾಜಕಾರಣಿಗಳಿಗೆ ಅಶ್ವತ್ ನಾರಾಯಣ ಅವರು ಅಪವಾದ, ಇವರದ್ದು ಮಾತು ಕನಿಷ್ಠ, ಕೆಲಸ ಗರಿಷ್ಠ ಎನ್ನುವ ನೀತಿ. ಈ ಪರಿಶ್ರಮವೇ ಅವರನ್ನು ಮುಂದೊಂದು ದಿನ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲಿದೆ. ಮಲ್ಲೇಶ್ವರ ಕ್ಷೇತ್ರದಲ್ಲಿ ಅದೆಷ್ಟೋ ಮಹಾನುಭಾವರು ಇದ್ದಾರೆ. ಕವಿಗಳು, ವಿಜ್ಞಾನಿಗಳು, ಪಂಡಿತರು, ಪದ್ಮಗಳು- ಭಾರತ ರತ್ನಗಳು ಇದ್ದಾರೆ. ಮುಂದಿನ ದಿನಗಳಲ್ಲಿ ಇದೇ ಕ್ಷೇತ್ರದಿಂದ ಒಬ್ಬ ಮುಖ್ಯಮಂತ್ರಿಯೂ ಹೊರಹೊಮ್ಮಲಿ ಎಂದು ಹೇಳಿದರು.