ಮಾ.13 ದ.ಕ, ಉಡುಪಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ. 13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿಯಲ್ಲಿ ಹಲವೆಡೆ ನಿನ್ನೆ (ಮಾ.11) ಸಂಜೆ ಮೋಡ ಕವಿದ ವಾತಾವರಣವಿದ್ದು ಮಾ.13 ರಂದು ದ.ಕ, ಉಡುಪಿ ಸೇರಿದಂತೆ ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಸುಳಿಗಾಳಿ ಬೀಸುತ್ತಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಾ.11ರ ಗುರುವಾರ 8.30ಕ್ಕೆಅಂತ್ಯಗೊಂಡ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕಲಬುರ್ಗಿಯಲ್ಲಿ 38.5ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಾಖಲಾದ ಅತೀ ಗರಿಷ್ಠ ತಾಪಮಾನ ಇದಾಗಿದೆ. ದಾವಣಗೆರೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನುಳಿದ ರಾಜ್ಯದಲ್ಲಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರೆಯಲಿದೆ” ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!