ಮಂಗಳೂರು: ವಿಮಾನ ದುರಂತಕ್ಕೆ ಸಲ್ಲಿಸಿದ್ದ ಖಾಸಗಿ ದೂರು ಹೈಕೋರ್ಟ್ ರದ್ದು
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010 ರಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದು ಪಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಇಂಡಿಯಾ ಮತ್ತು ಅಧಿಕಾರಿಗಳ ವಿರುದ್ಧ 2012ರ ಮಾ. 6ರಂದು ಮಂಗಳೂರು ಮೂಲದ ಫೌಂಡೇಷನ್ ಖಾಸಗಿ ದೂರು ದಾಖಲಿಸಿತ್ತು.ವಿಮಾನ ನಿಲ್ದಾಣವು ಐಸಿಎಒ ಮಾನದಂಡಗಳ ಪ್ರಕಾರ ಕಾರ್ಯನಿರ್ವಹಿಸಲು ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆ ನಡೆಯುತ್ತಿತ್ತು. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಇದೀಗ ಪ್ರಕರಣಕ್ಕೆ ಸಂಬಂಧಿಸಿ, ಖಾಸಗಿ ದೂರನ್ನು ಮತ್ತು 2ನೇ ಜೆಎಂಎಫ್ಸಿ ನ್ಯಾಯಾಲಯ ನಡೆಸುತ್ತಿದ್ದ ಅರ್ಜಿಯ ವಿಚಾರಣೆಯನ್ನು ಹೂಕೋರ್ಟ್ ರದ್ದುಗೊಳಿಸಿದೆ ಎಂದು ತಿಳಿದು ಬಂದಿದೆ