ಲಕ್ಷಾಂತರ ಮೌಲ್ಯದ ಅಕ್ರಮ ಚಿನ್ನ ಸಾಗಾಟ: ಓರ್ವನ ಬಂಧನ
ಮಂಗಳೂರು : ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಕೇರಳದ ಕೊಪ್ಪಾ ಮೂಲದ ಮಮ್ಮಿನಿ ಖಾಲಿದ್ (45) ಅಧಿಕಾರಿಗಳು ವಶಕ್ಕೆ ಪಡೆದ ಪ್ರಯಾಣಿಕ. ದುಬೈನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಈತನು ಒಳ ಉಡುಪುಗಳಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಾಟ ಮಾಡಲು ಯತ್ನಿಸಿದ್ದಾನೆ. ಈತನನ್ನು ವಶಕ್ಕೆ ಪಡೆದ ಅಧಿಕಾರಿಗಳು, ಈತನಿಂದ 33,75,470 ಮೌಲ್ಯದ 737 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತದೆ.