ದ.ಕ ಜಿಲ್ಲಾ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಂದಾಳು, ಬಿ.ಸದಾನಂದ ಪೂಂಜಾ ನಿಧನ
ಬಂಟ್ವಾಳ: ದ.ಕ ಜಿಲ್ಲಾ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಂದಾಳು, ಬಿ.ಸದಾನಂದ ಪೂಂಜಾ (80) ಅವರು ಇಂದು (ಮಾ.13) ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ವಿಧಿವಶರಾಗಿದ್ದಾರೆ. ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸಹಿತ ಎಲ್ಲಾ ರಂಗಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸದಾನಂದ ಅವರು ಸಜೀಪಮೂಡ ಗ್ರಾಮದ ಅಭಿವೃದ್ದಿಯ ರೂವಾರಿಯಾಗಿ ಗುರುತಿಸಿಕೊಂಡಿದ್ದರು.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದ ಇವರು, ಇವರು ಸಜೀಪ ಪಾಗಣೆಯ ಆಡಳಿತಗಾರರಾಗಿದ್ದರು. ಅಲ್ಲದೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೂಡಾ ಸೇವೆ ಸಲ್ಲಿಸಿದ್ದರು. ಸುಭಾಷ್ ನಗರ ಶಾರದೋತ್ಸವ ಸಮಿತಿ, ಸುಭಾಷ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾಗಿ ಹಾಗೂ ಸಜೀಪಮೂಡದಲ್ಲಿ ಸ.ಪ.ಪೂ. ಕಾಲೇಜು ಸ್ಥಾಪನೆಗೆ ಸದಾನಂದ ಅವರು ಪ್ರಮುಖ ಕಾರಣೀಕರ್ತರಾಗಿದ್ದರು.
ಮೃತರ ನಿಧನಕ್ಕೆ ರಾಜ್ಯಸಭಾ ಸದಸ್ಯರಾದ ಓಸ್ಕರ್ ಫೆರ್ನಾಂಡಿಸ್, ಜನಾರ್ದನ ಪೂಜಾರಿ, ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಮಂಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಸಂತಾಪ ವ್ಯಕ್ತಪಡಿಸಿದ್ದಾರೆ.