ಉಡುಪಿ: ಇ – ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

ಉಡುಪಿ ಮಾ. 15: ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸರ್ವೆ ನಂ 180, 157, 189 ರಲ್ಲಿನ 11.90 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸರ್ವೆ ನಂ. 174, 56 ರಲ್ಲಿನ 5.70 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು
ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ SAND APP ನ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ.

ಅದ್ದರಿಂದ ಸದರಿ ಮರಳನ್ನು ಪಡೆದುಕೊಳ್ಳಲು ಇಚ್ಚಿಸುವವವರು UDUPI E-SAND APP ಮುಖಾಂತರ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ , ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ , ರಜತಾದ್ರಿ, A ಬ್ಲಾಕ್, ಮೊದಲನೇ ಮಹಡಿ, ಮಣಿಪಾಲ, ಉಡುಪಿ ಜಿಲ್ಲೆ, ಉಡುಪಿ, ದೂರವಾಣಿ ಸಂಖ್ಯೆ: 0820-2572333, UDUPI E-SAND APP ದೂರವಾಣಿ ಸಂಖ್ಯೆ – 6366248666, 6366743888, 6366871888 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂವಿಜ್ಞಾನಿ ಹಾಗೂ ಸದಸ್ಯ ಕಾರ್ಯದರ್ಶಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ, ಉಡುಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 thought on “ಉಡುಪಿ: ಇ – ಸ್ಯಾಂಡ್ ಆಪ್ ಮೂಲಕ ಮರಳು ಲಭ್ಯ

Leave a Reply

Your email address will not be published. Required fields are marked *

error: Content is protected !!