ಕೋವಿಡ್ ಎರಡನೆ ಅಲೆಯ ಭೀತಿ-ಮದುವೆ, ಧಾರ್ಮಿಕ ಕಾರ್ಯಕ್ರಮಕ್ಕೆ 500ಜನಕ್ಕೆ ಮಿತಿ

ಬೆಂಗಳೂರು: ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ  ಸಂಜೆ ವಿಧಾನಸೌಧದಲ್ಲಿ ಅಧಿಕಾರಿಗಳು ಹಾಗೂ ಆರೋಗ್ಯ ತಜ್ಞರೊಂದಿಗೆ ಸಭೆ ನಡೆಸಿ ಕೋವಿಡ್ ಕುರಿತು ರಾಜ್ಯದಲ್ಲಿನ ಪರಿಸ್ಥಿತಿ ಕುರಿತು ಅವಲೋಕನ ನಡೆಸಿದರು.

ಸಭೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಆರ್ ಟಿಪಿಸಿಆರ್ ಟೆಸ್ಟ್ , ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಪಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ದಂಡ ಹೆಚ್ಚಳ ಹಾಗೂ ಲಸಿಕೆಯನ್ನು ಇನ್ನಷ್ಟು ಹೆಚ್ಚಿಸುವುದು ಸೇರಿದಂತೆ ಇತರೆ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕೋವಿಡ್ ಪರಿಸ್ಥಿತಿ ಅವಲೋಕನ ನಡೆಸಿ ತಜ್ಞರ ಜೊತೆ ಸಮಾಲೋಚನೆ ನಡೆಸಲಾಗಿದೆ. ತಜ್ಞರ ಅಭಿಪ್ರಾಯದಂತೆ 14 ದಿನಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಮರಣ ಪ್ರಮಾಣ ಕಡಿಮೆ ಇದೆ. ಬೀದರ್ ಕಲಬುರಗಿ, ಬೆಂಗಳೂರು ಗ್ರಾಮಾಂತರ, ಉಡುಪಿ, ತುಮಕೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಕೋವಿಡ್ ಎರಡನೆ ಅಲೆಯ ಭೀತಿಗೆ ಲಸಿಕೆ ಕಾರ್ಯಕ್ರಮ ಹೆಚ್ಚಳ ಮಾಡಬೇಕಿದೆ ಎಂದರು. 

ಆರೋಗ್ಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳಿಗೆ ಶೇ.50 ರಷ್ಟು ಲಸಿಕೆ ಹಾಕಲಾಗಿದೆ. ಕೋವಿಡ್ ಅನ್ನು ನಿಯಂತ್ರಿಸುವ ಸಂಬಂಧ ಮತದಾರರ ಪಟ್ಟಿಯನ್ನಾಧರಿಸಿ ಕೋವಿಡ್ ಲಸಿಕೆ ನೀಡಲು ಸಿದ್ಧತೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಮಾಸ್ಕ್  ಹಾಕದವರಿಗೆ ದಂಡ ವಿಧಿಸುವುದು ಅನಿವಾರ್ಯ. ಮದುವೆ ಮತ್ತು ಧಾರ್ಮಿಕ ,ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂಖ್ಯೆಯನ್ನು 500 ಜನಕ್ಕೆ ಮಿತಿಗೊಳಿಸುವುದು. ರೋಗಿಗಳು ಮತ್ತು ಸಂಪರ್ಕಿತರನ್ನು ಪತ್ತೆ ಹಚ್ಚುವುದು, ಕೋವಿಡ್ ಆಸ್ಪತ್ರೆಗೆ ಸಿದ್ದತೆ ಮಾಡಿಕೊಳ್ಳುವುದು, ಹಿರಿಯ ನಾಗರಿಕರಿಗೆ ಲಸಿಕೆಯನ್ನು ಹೆಚ್ಚಿಸಲಾಗುವುದು. ಕೋವಿಡ್ ಕುರಿತ ಜಾಗೃತಿಗೆ ಸಾಮಾಜಿಕ ಸೇವಾ ಸಂಸ್ಥೆಗಳಾದ ರೋಟರಿ, ಲಯನ್ಸ್ ಸಂಸ್ಥೆಗಳನ್ನು ಬಳಸಿಕೊಂಡು ಜನರಿಗೆ ಲಸಿಕೆ ಹಾಗೂ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುವುದು.ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆ ಮೇರೆಗೆ ಪಕ್ಕದ ಮಹಾರಾಷ್ಟ್ರ ಮತ್ತು ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ಕಟ್ಟುನಿಟ್ಟಾದ ನಿಗಾ ವಹಿಸುವುದಾಗಿ ಸಿಎಂ ಸ್ಪಷ್ಟಪಡಿಸಿದರು.

ಇದೇ ಮಾರ್ಚ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೋವಿಡ್ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗುತ್ತಿದ್ದು,  ಮಾಸ್ಕ್ ಧರಿಸದಿದ್ದರೆ ದಂಡ ಪಾವತಿಯನ್ನು 250 ರೂ.ಗೆ ಹೆಚ್ಚಿಸುವ ಬಗ್ಗೆ ಇನ್ನು ನಾಲ್ಕೈದು ದಿನಗಳಲ್ಲಿ ಮತ್ತೆ ಹೆಚ್ಚಳದ ಬಗ್ಗೆ ಸಭೆ ನಡೆಸಿ ತೀರ್ಮಾನಿಸಲಾಗುವುದು.ಇದಕ್ಕೆ ಜನರ ಸಹಕಾರ ನೀಡುವಂತೆ ಸಿಎಂ ಮನವಿ ಮಾಡಿದರು.
ವ್ಯಾಕ್ಸಿನೇಷನ್ ಅನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಬೇಕು. ಕನಿಷ್ಟ 3 ಲಕ್ಷ ಹಚ್ಚಳ ಮಾಡಲಾಗುವುದು.ಇದುವರೆಗೂ ಶಾಲಾ ಕಾಲೇಜುಗಳ ಬಗ್ಗೆ ತೀರ್ಮಾನ ಕೈಗೊಂಡಿಲ್ಲ.ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಹೇಳಿದರು.

ಕೋವಿಡ್-19 ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಗ ಸೂಚಿಗಳನ್ನು ಸೂಚಿಸಲಾಗಿದೆ. 
ಆ ಪ್ರಕಾರ ಜಿಲ್ಲೆಯ ಅಳವಡಿಸಬೇಕಾದ ಮಾರ್ಗ ಸೂಚಿಗಳನ್ನು ಹೀಗಿವೆ.
1) ಸಾರ್ವಜನಿಕ ಸ್ಥಳಗಳಲ್ಲಿ ಬಸ್‌ಗಳು/ಟ್ರೇನ್‌‌ಗಳು/ಸಿನಿಮಾ ಥಿಯೇಟರ್‌ಗಳು/ಮಾಲ್‌ಗಳು/ಮಾರುಕಟ್ಟೆಗಳು  ಇನ್ನಿತರ ಜನನಿಬಿಡ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ ವಾಗಿದೆ. ಈ ನಿಯಮವನ್ನು ಪಾಲಿಸುವಲ್ಲಿ ತಪ್ಪಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. 
2) ಸಭೆ/ಸಮಾರಂಭಗಳಲ್ಲಿ ಜನರ ಪಾಲ್ಗೊಳ್ಳುವಿಕೆಯ ಬಗ್ಗೆ ಇತ್ತೀಚಿನ ಸರಕಾರದ ಆದೇಶವನ್ನು ಪಾಲಿಸತಕ್ಕದ್ದು. ತಪ್ಪಿದ್ದಲ್ಲಿ ದಂಡ/ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. 
 3)ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಜಿಲ್ಲೆಗೆ ಬರುವ ಪ್ರಯಾಣಿಕರಿಗೆ 72 ಗಂಟೆಗಳೊಳಗೆ ಮಾಡಿದ ಆರ್‌ಟಿಪಿಸಿಆರ್‌ ವರದಿ ಕಡ್ಡಾಯವಾಗಿದೆ.
4) ಎಲ್ಲಾ ಪಾಸಿಟಿವ್ ಪ್ರಕರಣಗಳ ಸಂಪರ್ಕಿಗಳು, ಕೋವಿಡ್ ಸೋಂಕಿನ ಲಕ್ಷಣ ಇರುವವರು, ಬೇರೆ ರಾಜ್ಯಗಳಿಂದ ಪ್ರಯಾಣಿಸಿದವರು, ಹಾಗೂ Vulnerable ಜನರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ
5) 60ವರ್ಷಕ್ಕಿಂತ ಮೇಲ್ಪಟ್ಟ  ಹಿರಿಯ ನಾಗರೀಕರು ಹಾಗೂ 45 ರಿಂದ 59 ವರ್ಷಗಳೊಳಗಿನ ಇತರೆ ಖಾಯಿಲೆ ಹೊಂದಿರುವವರು (Vulnerable) ಆದ್ಯತೆಯ ಮೇರೆಗೆ ಕೋವಿಡ್-19 ಲಸಿಕೆಯ ಎರಡು ಡೋಸ್‌ನ್ನು ತಮ್ಮ ಹತ್ತಿರದ ಸರ್ಕಾರಿ/ ಖಾಸಗಿ ಆಸ್ಪತ್ರೆಯಲ್ಲಿ  ಪಡೆಯುವಂತೆ ಸೂಚಿಸಲಾಗಿದೆ.    
ಇನ್ನು ಈ ಸಭೆಯಲ್ಲಿ ಕೋವಿಡ್-19 ಎರಡನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಸೂಕ್ತ ಕ್ರಮ ಕೈಗೊಳ್ಳಲು 2020 ರ ಸಾಂಕ್ರಾಮಿಕ ಕಾಯ್ದೆ ಯಡಿಯಲ್ಲಿ ಯಾವುದೇ ಅಧಿಕಾರವನ್ನು ಚಲಾಯಿಸಲು ಜಿಲ್ಲಾಧಿಕಾರಿಯವರಿಗೆ ಸಂಪೂರ್ಣ ಸ್ವಾಯತ್ತೆ ನೀಡುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.

     






                                            




ReplyForward











1 thought on “ಕೋವಿಡ್ ಎರಡನೆ ಅಲೆಯ ಭೀತಿ-ಮದುವೆ, ಧಾರ್ಮಿಕ ಕಾರ್ಯಕ್ರಮಕ್ಕೆ 500ಜನಕ್ಕೆ ಮಿತಿ

  1. It is better stop promoting this fake pandemic for political gains andfor creating pains for the people.

Leave a Reply

Your email address will not be published. Required fields are marked *

error: Content is protected !!