ಹೆಬ್ರಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಸುಟ್ಟು ಕರಕಲಾದ ಆಲ್ಟೊ
ಉಡುಪಿ(ಉಡುಪಿ ಟೈಮ್ಸ್ ವರದಿ): ಬ್ಯಾಟರಿ ಶಾರ್ಟ್ ಸಕ್ರ್ಯೂಟ್ ನಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಕಾರ್ಕಳ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯ ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆ ಬಳಿ ನಡೆದಿದೆ.
ಹಾವೇರಿ ಜಿಲ್ಲೆ ನೋಂದಣಿ ಹೊಂದಿರುವ ಈ ಕಾರು ರಮೇಶ್ ಅನ್ನುವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಬೆಂಕಿ ಆವರಿಸುತ್ತಿದ್ದುದನ್ನು ಕಂಡ ಸ್ಥಳೀಯರು ಕೂಡಲೇ ಕಾರ್ಕಳ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
ಈ ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ ಎಮ್ ಸಂಜೀವ , ದಪೆದಾರ್ ರೂಪೇಶ್,ಸಿಬ್ಬಂದಿಗಳಾದ ಜಯ ಮೂಲ್ಯ , ಮನೋಹರ್ ಪ್ರಸಾದ್ , ನಿತ್ಯಾನಂದ, ಸುಜಯ ಭಾಗವಹಿಸಿದ್ದರು.