ಕುಂದಾಪುರ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು
ಕುಂದಾಪುರ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಘಟನೆ ಕುಂದಾಪುರದ ವಡೇರಹೋಬಳಿ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ ಎಂಬುವವರು ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಇವರು ಕೆಲಸ ಮಾಡುತ್ತಿದ್ದ ಕಂಪನಿಯ ವರು ನೀಡಿದ ಬೈಕ್ ನ್ನು ಮಾ. 15 ರಂದು ಮನೆ ಮುಂದೆ ನಿಲ್ಲಿದ್ದರು. ಮಾ. 16 ರಂದು ಬೆಳಿಗ್ಗೆ ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಇಲ್ಲದೆ ಇದ್ದು, ಯಾರೋ ಕಳ್ಳರು ಬಂದು ಬೈಕ್ ನ್ನು ಕಳವು ಮಾಡಿ ಹೋಗಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.