ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನ- ಇಬ್ಬರ ಬಂಧನ

ಉಡುಪಿ(ಉಡುಪಿ ಟೈಮ್ಸ್ ವರದಿ) : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯ ಕುಂಜಿಬೆಟ್ಟಿನ ಬಳಿ ಇರುವ ವಸತಿಗೃಹದ ಬಳಿ ನಡೆಸಿದೆ.

ಕೆಎಸ್ ಗೌತಮ್ ಗೌಡ (23), ವಿಕ್ಕಿ ದಯಾಳ್ ‌ಯಾನೆ ವಿಕ್ಕಿ (21)‌ ಬಂಧಿತ ಆರೋಪಿಗಳು. ಬಂಧಿತರಿಂದ ಕೆಂಪು ಬಣ್ಣದ ಪ್ಲಾಸ್ಟಿಕ್‌ ಲಕೋಟೆಯಲ್ಲಿದ್ದ 1050 ಗ್ರಾಂ ತೂಕದ 30,000 ರೂಪಾಯಿ ಮೌಲ್ಯದ ಗಾಂಜಾ ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ತಿಳಿದು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!