ಮಕ್ಕಳಿಬ್ಬರಿಗೆ ವಿಷವಿಕ್ಕಿ ಆತ್ಮಹತ್ಯೆ ಮಾಡಿಕೊಂಡ ತಂದೆ
ಕಾಸರಗೋಡು : ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯೊಂದರಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಘಟನೆ ಕಾಸರಗೋಡಿನ ಚೆರ್ವತ್ತೂರಿನಲ್ಲಿ ನಡೆದಿದೆ.
ಪಿಲಿಕ್ಕೋಡು ಮಡಿವಾಯಿಯ ಆಟೋರಿಕ್ಷಾ ಚಾಲಕ ರೂಪೇಶ್ (37) ಮತ್ತು ಮಕ್ಕಳಾದ ವೈದಹಿ (10), ಶಿವಾನಂದ (6) ಮೃತಪಟ್ಟವರು. ಮಕ್ಕಳಿಬ್ಬರ ಮೃತದೇಹದ ವಿಷ ಸೇವಿಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ರೂಪೇಶ್ ಅವರ ಮೃತದೇಹ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಕ್ಕಳಿಗೆ ವಿಷ ವುಣಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ರೂಪೇಶ್ ಅವರು ಕಾಞಂಗಾಡ್ನ ಸವಿತಾ ಎಂಬಾಕೆಯನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ವಿರಸ ಮೂಡಿ ಇಬ್ಬರು ಬೇರೆ ಬೇರೆ ವಾಸವಾಗಿದ್ದರು ಎನ್ನಲಾಗಿದೆ. ಇಬ್ಬರು ಮಕ್ಕಳು ತಂದೆ ಜೊತೆ ವಾಸವಾಗಿದ್ದರು. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಚಂದೇರಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ