ಮಣಿಪಾಲ: ಹೆಚ್ಚಿದ ಕೊರೋನಾ ಸೋಂಕು- ಎಂಐಟಿ ಕಂಟೈನ್‌ಮೆಂಟ್ ಜೋನ್

ಮಣಿಪಾಲ: (ಉಡುಪಿ ಟೈಮ್ಸ್ ವರದಿ)ಇಲ್ಲಿನ ಎಂಐಟಿಯ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕಾಲೇಜ್ ನ ಕ್ಯಾಂಪಸ್‌ನ್ನು ಕಂಟೈನ್ ಮೆಂಟ್ ಜೋನ್ ಆಗಿ ಜಿಲ್ಲಾ ಆರೋಗ್ಯ ಇಲಾಖೆ ಘೋಷಿಸಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಕಂಡುಬರುತ್ತಿರುವ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಣಿಪಾಲದ ಎಂಐಟಿಯ ವ್ಯಾಪ್ತಿಯಲ್ಲಿ ಕಂಡುಬರುತ್ತಿದ್ದು, ಇಂದಿನ ಜಿಲ್ಲೆಯ ಒಟ್ಟು ಪ್ರಕರಣಗಳಲ್ಲಿ 27 ಎಂಐಟಿ ಯಲ್ಲಿಯೇ
ಕಂಡುಬ0ದಿದ್ದು, ಈ ಪ್ರಧೇಶವನ್ನು ಕಂಟೈನ್ ಮೆಂಟ್ ಝೋನ್ ಮಾಡಲಾಗುತ್ತಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಮಣಿಪಾಲ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಅವಧಿ ಮೀರಿ ಪಬ್ ಮತ್ತು ಬಾರ್ ಗಳು ತೆರೆದಿದ್ದು

ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿದ್ದು ಇಂತಹ ಪಬ್ ಬಾರ್ ಗಳ ವಿರುದ್ದ ಅಬಕಾರಿ ಇಲಾಖೆಯಿಂದ ಕಠಿಣ ಕ್ರಮ ಕೈಗೊಳ್ಳುವಂತೆ ಜಿ.ಜಗದೀಶ್ ಸೂಚನೆ ನೀಡಿದರು. ಜಿಲ್ಲೆಗೆ ಮಹಾರಾಷ್ಟ, ಮುಂಬೈ ಮತ್ತು ಕೇರಳದಿಂದ ಬರುವವರು 72 ಗಂಟೆಗಳ ಕೋವಿಡ್ ನೆಗೆಟಿವ್ ವರದಿ ಪಡೆಯುವುದು ಕಡ್ಡಯವಾಗಿದ್ದು, ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸುವವರ ಮಾಹಿತಿ ಇದ್ದಲ್ಲಿ ಸಾರ್ವಜಿನಿಕರು ಕೂಡಲೇ ಆರೋಗ್ಯ ಇಲಾಖೆಗೆ ಅಥವಾ ಸಂಬoದಪಟ್ಟ ಪಂಚಾಯತ್ ಅಥವಾ ತಹಸೀಲ್ದಾರ್ ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕರಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!