ಉಡುಪಿ: ವೇಶ್ಯಾವಾಟಿಕೆ ನಡೆಸುತಿದ್ದ ಲಾಡ್ಜ್ ಗೆ ದಾಳಿ, ಮೂವರ ಬಂಧನ

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ದುರ್ಗಾ ಇಂಟರ್ ನ್ಯಾಶನಲ್ ಹೊಟೇಲಿನ ಕೊಠಡಿಯೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದ್ದು, ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿದ ಡಿಸಿಐಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶೇಖರ ಶೆಟ್ಟಿ, ಜೋನ್ಸನ್ ಡಿ ಅಲ್ಮೇಡಾ , ಹರ್ಷಿತ್ ಶೆಟ್ಟಿ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಮನು, ರಾಜು ಮತ್ತು ಉದ್ಯಮಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಎಂಬವರು ಒಟ್ಟು ಸೇರಿ ಹೊಟೇಲಿನ ಕೊಠಡಿಯಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.

ಬಂಧಿತರಿಂದ 4 ಮೊಬೈಲ್ ಫೋನ್, 6730 ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿ ಈ ಬಗೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!