ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ತಿಂಗಳೊಳಗೆ ಇತ್ಯರ್ಥಗೊಳಿಸಿ: ಸುಪ್ರೀಂ ಕೋರ್ಟ್
ಉಡುಪಿ: ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ 2016 ರಲ್ಲಿ ನಡೆದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿಯನ್ನು ತಿಂಗಳೊಳಗೆ ಇತ್ಯರ್ಥಗೊಳಿಸಿವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಿರಂಜನ್ ಭಟ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ಒಂದು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದೆ. ಒಂದು ವೇಳೆ ಈ ಪ್ರಕರಣ ಇತ್ಯರ್ಥವಾಗದೇ ಇದ್ದಲ್ಲಿ, ನಿರಂಜನ್ ಭಟ್ ಗೆ ಜಾಮೀನು ಮಂಜೂರು ಮಾಡುವಂತೆ ಸುಪ್ರೀಂ ಆದೇಶಿಸಿದೆ.
ಮಾ.16 ರಂದು ಉಡುಪಿ ನ್ಯಾಯಾಲಯದಲ್ಲಿ ಸಾಕ್ಷಿದಾರರ ವಿಚಾರಣೆ ನಡೆಸಲಾಯಿತು. ಹಿಂದಿನ ಎಎಸ್ಪಿ ಆಗಿದ್ದ ಸುಮನಾ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಸಿಐಡಿ ತನಿಖಾಧಿಕಾರಿ ಚಂದ್ರಶೇಖರವರ ವಿಚಾರಣೆ ಮಾ. 25ರಂದು ನಡೆಯಲಿದೆ. ಆ ಬಳಿಕ ಇನ್ನೋರ್ವ ಸಾಕ್ಷಿದಾರ ವಿವೇಕಾನಂದ ಶೆಟ್ಟಿ ಅವರ ವಿಚಾರಣೆಯೂ ನಡೆಯಲಿದೆ. ವಾದ-ಪ್ರತಿವಾದಗಳು ನಡೆದು ಪ್ರಕರಣವನ್ನು ತಿಂಗಳೊಳಗೆ ಮುಗಿಸುವ ಉದ್ದೇಶ ಹೊಂದಲಾಗಿದೆ ಎಂದು ಹಿರಿಯ ವಕೀಲ ಶಾಂತರಾಮ್ ಶೆಟ್ಟಿ ಅವರು ತಿಳಿಸಿದ್ದಾರೆ