ತೆಂಕನಿಡಿಯೂರು: ಸುಳ್ಳು ಜಾತಿ ನಿಂದನೆ ಪ್ರಕರಣ – ಪಾರದರ್ಶಕ ತನಿಖೆಗೆ ಮನವಿ

ಉಡುಪಿ: ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡದೇ ಪಂಚಾಯತ್ ಮುಖ್ಯದ್ವಾರವನ್ನೇ ಬದಲಾವಣೆ ಮಾಡಿದ್ದಕ್ಕೆ ಪ್ರತಿಭಟನೆ ನಡೆಸಿದವರ ಮೇಲೆ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಿರುವ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರ ದೂರನ್ನು ಪಾರದರ್ಶಕವಾಗಿ ತನಿಖೆ ನಡೆಸುವಂತೆ ಹಾಗೂ ತಾಲೂಕು ಪಂಚಾಯತ್ ಸದಸ್ಯ ಧನಂಜಯ ಕುಂದರ್ ಹಾಗೂ ಇತರರಿಗೆ ಬೆದರಿಕೆ ಹಾಕಿರುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರಿಗೆ ಮನವಿ ಸಲ್ಲಿಸಿದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯರ ನಿಯೋಗ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದರು.

ಈ ವೇಳೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಖ್ಯಾತ್ ಶೆಟ್ಟಿ, ಶರತ್ ಶೆಟ್ಟಿ, ಅನುಷಾ, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಪಂಚಾಯತ್ ಮಾಜಿ ಅಧ್ಯಕ್ಷರಾದ ಯತೀಶ್ ಕರ್ಕೇರಾ, ಉಡುಪಿ ಬ್ಲಾಕ್ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಹಮೀದ್ ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *

error: Content is protected !!