ಕುತ್ಪಾಡಿ: ಮಾನಸಿಕ ಖಾಯಿಲೆಯಿಂದ ನೊಂದು ಯುವಕ ಆತ್ಮಹತ್ಯೆ

ಉಡುಪಿ: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕುತ್ಪಾಡಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ್‌ ಪೂಜಾರಿ (36) ಆತ್ಮಹತ್ಯೆ ಮಾಡಿಕೊಂಡವರು . ಇವರು ಅವಿವಾಹಿತನಾಗಿದ್ದು, ಕಳೆದ ಹತ್ತು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ  ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆದುಕೊಂಡಿದ್ದರೂ ಗುಣಮುಖರಾಗದ ಕಾರಣ ಮನನೊಂದು ಇಂದು ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!