ಕೊರೋನಾಗೆ ಲಸಿಕೆ ಬಂದಿದೆ, ಸರ್ಕಾರದಲ್ಲಿರುವ ಭ್ರಷ್ಟಾಚಾರದ ವೈರಸ್’ಗೆ ಎಲ್ಲಿಂದ ಲಸಿಕೆ ತರುವುದು?- ಸಿದ್ದರಾಮಯ್ಯ

ಬೆಂಗಳೂರು: ಕೊರೊನಾವೈರಸ್‌ಗೆ ಲಸಿಕೆ ಬಂದಿದೆ. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಕ್ಕೆ ತಗುಲಿರುವ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. 

ಈ ಸಂಬಂಧ  ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಕೊರೋನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೋನಾ ವೈರಸ್. ಮುಖ್ಯಮಂತ್ರಿಯವರೇ, ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ?’ ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಬಿ.ಎಸ್. ಯಡಿಯೂರಪ್ಪ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ?’ ಎಂದು ಕೇಳಿದರು.

ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೋನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!