ಬ್ರಹ್ಮಾವರ: ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಬೋನಿಗೆ

ಬ್ರಹ್ಮಾವರ: ನೈಲಾಡಿ ಸಮೀಪ ಆಹಾರ ಹುಡುಕಿ ಬಂದಿದ್ದ ಚಿರತೆಯೊಂದು ಮನೆಯ ಕೋಣೆಯೊಳಗೆ ಬಂಧಿಯಾಗಿದೆ.
ಭಾನುವಾರ ಬೆಳಗ್ಗಿನ ಜಾವ ಆಹಾರ ಹುಡುಕತ್ತಾ ಬಂದಿದ್ದ ಚಿರತೆ ಸಾಕು ನಾಯಿಯ ಭೇಟೆಗೆ ಮುಂದಾಗಿತ್ತು. ಈ ವೇಳೆ ಹೆದರಿದ ನಾಯಿ ಮನೆಯ ಕೋಣೆಯೊಳಗೆ ನುಗಿತ್ತು‌. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ತಕ್ಷಣ ಕೋಣೆ ಬಾಗಿಲು ಹಾಕಿದ್ದಾರೆ.

ಬಳಿಕ ಸ್ಥಳಕ್ಕೆ ಶಂಕರನಾರಾಯಣ ವಲಯದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಸತತ ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಂಧಿಸಲಾಗಿದೆ.

ಬಳಿಕ ಸೈಬರ್‌ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಸುರಕ್ಷಿತವಾಗಿ ಬಿಡಲಾಯಿತು.

Leave a Reply

Your email address will not be published. Required fields are marked *

error: Content is protected !!