ಉಡುಪಿ: ಇಬ್ಬರಿಗೆ, ದ.ಕ. 23 ಮಂದಿಗೆ ಸೋಂಕು ದೃಢ, ಉಡುಪಿಯಲ್ಲಿ 820 ಡಿಸ್ಚಾರ್ಜ್
ಉಡುಪಿ: ಕೊರೋನಾ ಸೋಂಕಿನಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಕೂಡಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ .
ಇಂದಿನ 2 ಹೊಸ ಪ್ರಕರಣಗಳ ಕಾರಣದಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 1028 ಕ್ಕೆ ಏರಿಕೆಯಾಗಿದೆ. ಇಂದಿನ ಸೋಂಕಿತರ ಪೈಕಿ 51 ವರ್ಷದ ಮಹಿಳೆ ಮಹಾರಾಷ್ಟ್ರದಿಂದ ಬಂದಿದ್ದರೆ, 29 ವರ್ಷದ ಮಹಿಳೆಗೆ ಸೋಂಕಿತ ಸಂಖ್ಯೆ 5451ರ ಸಂಪರ್ಕದಿಂದ ಸೋಂಕು ತಾಗಿದೆ ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 820 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಇಂದೂ ಕೂಡ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಒಟ್ಟು 213 ಮಂದಿಗೆ ಕೊರೋನಾ ವೈರಸ್ ಒಕ್ಕರಿಸಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 213 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದೂ ಕೂಡ ರಾಜ್ಯದಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 88ಕ್ಕೆ ಏರಿಕೆಯಾಗಿದೆ. ಇತರೆ ಕಾರಣಗಳಿಂದ ಸಾವನ್ನಪ್ಪಿದ ಕೊರೋನಾ ಸೋಂಕಿತರ ಸಂಖ್ಯೆ 3ಕ್ಕೇರಿದೆ.
ಇನ್ನು ರಾಜ್ಯಾದ್ಯಂತ ಇಂದು ಒಟ್ಟು 180 ಮಂದಿ ಸೋಂಕಿತರು ಗುಣಮುಖರಾದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ನಿಂದ ಗುಣಮುಖರಾದವರ ಸಂಖ್ಯೆ 4135ಕ್ಕೆ ಏರಿಕೆಯಾಗಿದೆ. ಉಳಿದಂತೆ ರಾಜ್ಯದಲ್ಲಿ ಪ್ರಸ್ತುತ 2987 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ಗಂಭೀರ ಸ್ಥಿತಿಯಲ್ಲಿರುವ 56 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 23 ಮಂದಿ ಸೋಂಕಿತರು ಅಂತಾರಾಷ್ಚ್ರೀಯ ಪ್ರಯಾಣಿಕರಾಗಿದ್ದು, 103 ಮಂದಿ ಸೋಂಕಿತರು ಅಂತರ್ ರಾಜ್ಯ ಪ್ರಯಾಣ ಹಿನ್ನಲೆ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದು ಪತ್ತೆಯಾದ 213 ಹೊಸ ಪಾಸಿಟಿವ್ ಪ್ರಕರಣ ಗಳ ಪೈಕಿ ಬೆಂಗಳೂರಿನಲ್ಲಿ ಇಂದು 35 ಮಂದಿಗೆ ಸೋಂಕು ತಗುಲಿದ್ದು, ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿ ಶಿವಮೊಗ್ಗಕ್ಕೆ ತೆರಳಿದ್ದ ಪೊಲೀಸ್ ಕಾನ್‍ಸ್ಟೇಬಲ್ ಗೆ ಸೋಂಕು ತಗುಲಿದೆ.
ಉಳಿದಂತೆ ಕಲಬುರಗಿ 48, ಧಾರವಾಡ 34, ದಕ್ಷಿಣ ಕನ್ನಡ 23, ರಾಯಚೂರು 18, ಯಾದಗಿರಿ 13, ಬೀದರ್ 11, ಬಳ್ಳಾರಿ 10, ಕೊಪ್ಪಳ 4, ವಿಜಯಪುರ 3, ಬಾಗಲಕೋಟೆ 3, ಶಿವಮೊಗ್ಗ 3, ಹಾವೇರಿ 2, ರಾಮನಗರ 2, ಹಾಸನ 1 ಮತ್ತು ದಾವಣಗೆರೆಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.
Good luck for district administration and the government for the service of the people. During this difficult time of sevier spreading of Covid 19, wearing mask or face cover should be strictly practiced by all people. Keeping social distance etc is the duty of all people with out hesitation. Government and District administration should take steps as per the present situation. God bless you all the team of Corona warriors.