ಆಟೋ ರಿಕ್ಷಾ ಹಾಗೂ ಬಸ್ ನಡುವೆ ಭೀಕರ ರಸ್ತೆ ಅಪಘಾತ: 13 ಮಂದಿಯ ಸಾವು

ಗ್ವಾಲಿಯರ್(ಮಧ್ಯ ಪ್ರದೇಶ): ಆಟೋ ರಿಕ್ಷಾ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಇಂದು ಮಧ್ಯ ಪ್ರದೇಶದ ಗ್ವಾಲಿಯರ್ ನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ನಡೆದಿದೆ.

ವೇಗವಾಗಿ ಬರುತ್ತಿದ್ದ ಪ್ರಯಾಣಿಕರಿದ್ದ ಆಟೋರಿಕ್ಷಾ ಬಸ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ  12 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಪ್ರಯಾಣಿಕರಲ್ಲಿ 8 ಮಂದಿ ಮಹಿಳೆಯರು ಮತ್ತು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು ಮಹಿಳೆಯರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿಟ್ಟು ತಮ್ಮ ಮನೆಗೆ ಹಿಂತಿರುಗುತ್ತಿದ್ದರು ಎಂದು ಗ್ವಾಲಿಯರ್ ಎಸ್ ಪಿ ಅಮಿತ್ ಸಂಘಿ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!