ಬ್ರಹ್ಮಾವರ: ನಿರುದ್ಯೋಗದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ
ಬ್ರಹ್ಮಾವರ: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಉದಯ ನಾಯ್ಕ (47) ಆತ್ಮಹತ್ಯೆ ಮಾಡಿಕೊಂಡಿರುವವರು. ಯಾವುದೇ ಕೆಲಸವಿಲ್ಲದೆ ಮನೆಯಲ್ಲೇ ಇದ್ದ ಇವರು, ವಿಪರೀತ ಮದ್ಯಪಾನದ ಅಭ್ಯಾಸ ಹೊಂದಿದ್ದರು.
ಇದೇ ಕಾರಣದಿಂದ ಕುಡಿಯಲು ಹಣವಿಲ್ಲದೇ ಜೀವನದಲ್ಲಿ ಮನನೊಂದು ಮಾ.22 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.