ಕಾಪು: ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೊದ್ದಾರ ಪ್ರಯುಕ್ತ ಶಿಲಾ ಪುಷ್ಪ ಸಮರ್ಪಣೆ

ಕಾಪು: ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೊದ್ದಾರ ಹಿನ್ನೆಲೆ  ಶಿಲಾ ಪುಷ್ಪಸಮರ್ಪಣಾ ಪೂಜೆ ನಡೆಯಿತು. ಈ ದೇವಸ್ಥಾವು ಸುಮಾರು 35 ಕೋ. ರೂ. ವೆಚ್ಚದಲ್ಲಿ ಜೀರ್ಣೋದ್ದಾರಗೊಳ್ಳಲಿದ್ದು, ಇದರ ಅಂಗವಾಗಿ ದೇವಸ್ಥಾನದಲ್ಲಿ ಶಿಲಾ ಪುಷ್ಪಸಮರ್ಪಣೆ ನಡೆಯಿತು.

ಈ ಶಿಲಾ ಪುಷ್ಪ ಸಮರ್ಪಣೆಗೆ ಹೊಸ ಮಾರಿಗುಡಿಯ ತಂತ್ರಿಗಳಾದ ವಿದ್ವಾನ್ ಕೊರಂಗ್ರಪಾಡಿ ರಾಘವೇಂದ್ರ ತಂತ್ರಿ, ವೇ. ಮೂ. ಕುಮಾರಗುರು ತಂತ್ರಿ ಮತ್ತು ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನ ಸಮಿತಿ ಮತ್ತು ಸಾವಿರ ಸೀಮೆಯ ಭಕ್ತರ ಉಪಸ್ಥಿತಿಯಲ್ಲಿ 99 ಸಂಖ್ಯೆಯ ಶಿಲಾ ಸೇವೆ ಸಮರ್ಪಿಸಿದ 99 ಮಂದಿ ಭಕ್ತರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.

ಶಿಲಾ ಪುಷ್ಪ ಮಸರ್ಪಣೆಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಮಾತನಾಡಿ, ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕೂಡಿ ಬಂದಂತೆ, 200 ವರ್ಷಗಳ ಇತಿಹಾಸವುಳ್ಳ ನಮ್ಮೂರಿನ ಅಮ್ಮನ ಭವ್ಯ ದೇಗುಲ ನಿರ್ಮಾಣಕ್ಕೂ ಯೋಗ ಕೂಡಿ ಬಂದಿದೆ. ಭಕ್ತರ ದೇಣಿಗೆ ಯೊಂದಿಗೆ ಸರಕಾರದ ದೇಣಿಗೆಯನ್ನೂ ಸೇರಿಸಿ ದೇಗುಲ ನಿರ್ಮಿಸಿ ಸಮರ್ಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಗಣ್ಯರಾದ ಡಾ. ಬಿ.ಆರ್. ಶೆಟ್ಟಿ, ರವಿ ಸುಂದರ ಶೆಟ್ಟಿ, ಪ್ರಕಾಶ್ ಶೆಟ್ಟಿ ಬಂಜಾರ, ರಾಜಶೇಖರ ಕೋಟ್ಯಾನ್, ಅನಿಲ್ ಬಲ್ಲಾಳ್, ವಿಕ್ರಂ ಕಾಪು, ಧರ್ಮಪಾಲ ದೇವಾಡಿಗ, ಮಾನವ ಜೋಷಿ, ರತ್ನಾಕರ ಹೆಗ್ಡೆ, ವಿರಾರ್ ಶಂಕರ ಶೆಟ್ಟಿ, ಕಾಪು ಶ್ರೀ ಲಕ್ಷ್ಮಿಜನಾರ್ದನ ದೇವಸ್ಥಾನದ ಕಾ.ನಿ ಅಧಿಕಾರಿ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಆಡಳಿತ ಮೊಕ್ತಸರ ನಡಿಕೆರೆ ರತ್ನಾಕರ ಶೆಟ್ಟಿ, ನಿರ್ಮಲ್ ಕುಮಾರ್ ಹೆಗ್ಡೆ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭ ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾ.ನಿ. ಅಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ್ ಶೆಟ್ಟಿ ಕಾಪು,  ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಉಪಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು,  ವ್ಯವಸ್ಥಾಪನ ಸಮಿತಿ ಸದಸ್ಯರಾದ ಚಂದ್ರಶೇಖರ್ ಅಮೀನ್, ಜಗದೀಶ್ ಬಂಗೇರ, ರವೀಂದ್ರ ಎಂ., ರೇಣುಕಾ ದೇವಾಡಿಗ, ಶೈಲಜಾ ಪುರುಷೋತ್ತಮ್, ಬಾಬು ಮಲ್ಲಾರು, ಮಾರಿಗುಡಿಯ ಪಾತ್ರಿಗಳಾದ ಗುರುಮೂರ್ತಿ, ಸಚಿನ್ ಪಾತ್ರಿ, ನಿತೇಶ್ ಶೆಟ್ಟಿ ಎಕ್ಕಾರು, ಅರ್ಪಿತಾ ಪಿ. ಶೆಟ್ಟಿ ಕಟಪಾಡಿ, ಗಂಗಾಧರ ಸುವರ್ಣ ಕಾಪು ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!