ಉಡುಪಿ: ಕೋವಿಡ್ ನಿಯಮ ಉಲ್ಲಂಘನೆ ಒಂದೇ ದಿನ 41,000 ರೂ. ದಂಡ ಸಂಗ್ರಹ
ಉಡುಪಿ: ಜಿಲ್ಲೆಯಲ್ಲಿ ಕೊರೋನಾ 2ನೇ ಅಲೆ ಅರಂಭವಾಗಿದ್ದು, ಮತ್ತೆ ದಿನೇ ದಿನೇ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಮಾಸ್ಕ್ ಧರಿಸುವಂತೆ ಜಗೃತಿ ಮೂಡಿಸುವ ಜಿಲ್ಲಾಧಿಕಾರಿ ಜಿ ಜಗದೀಶ್ ರವರ ಜಾಗೃತಿ ಕಾರ್ಯಾಚರಣೆಯಲ್ಲಿ ಒಂದೇ ದಿನ ಮಾಸ್ಕ್ ಧರಿಸದೆ ನಿಯಮ ಕೋವಿಡ್ ಉಲ್ಲಂಘಿಸಿದವರಿಂದ ಬರೋಬ್ಬರಿ 41,000 ರೂ ದಂಡ ಸಂಗ್ರಹವಾಗಿದೆ.
ಈ ಬಗ್ಗೆ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 4,000 ರೂ., ಪಂಚಾಯತ್ ವ್ಯಾಪ್ತಿಯಲ್ಲಿ 5,300 ರೂ., ಅಬಕಾರಿ ಇಲಾಖೆಯಿಂದ 2,400 ರೂ., ಕಂದಾಯ ಇಲಾಖೆಯಿಂದ 9,900 ರೂ., ಪೆÇಲೀಸ್ ಇಲಾಖೆಯಿಂದ 19,400 ರೂ. ದಂಡ ವಸೂಲಿ ಮಾಡಲಾಗಿದೆ. ಈವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 23,629 ಮಂದಿಯಿಂದ 25,21,500 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.