ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ-ಲಾರಿ ಚಾಲಕ ಸಜೀವ ದಹನ

ಮಂಗಳೂರು: ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಮೃತ ಕಂಟೇನರ್ ಚಾಲಕನನ್ನು ಮೈಸೂರು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ನೆಲ್ಯಾಡಿ ಸಮೀಪ ಮಣ್ಣಗುಡ್ಡ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹಣಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಈ ವೇಳೆ ಬಸ್ ಪ್ರಯಾಣಿಕರು ತಕ್ಷಣವೇ ಹೊರಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ.

ಆದರೆ ಲಾರಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಬಸ್ಸು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!