ದೇಶದಲ್ಲಿ 700 ಕ್ಕೂ ಹೆಚ್ಚು ರೂಪಾಂತರಿ ಕೊರೊನಾ ವೈರಸ್ ಪತ್ತೆ!
ಬೆಂಗಳೂರು : ದೇಶದಲ್ಲಿ ರೂಪಾಂತರಿ ಕೊರೋನಾ ವಕ್ಕರಿಸಿದ್ದು 2 ತಿಂಗಳು ಜನತೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, 700 ಕ್ಕೂ ಹೆಚ್ಚು ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದೆ. ಹಾಗಾಗಿ, ನಿರ್ಲಕ್ಷ್ಯ ಮಾಡದೆ ರಾಜ್ಯದ ಜನರು ಎಚ್ಚರಿಕೆಯಿಂದ ಇರಿ. ರೂಪಾಂತರಿ ಕೊರೊನಾ ವೈರಸ್ ವೇಗವಾಗಿ ಹರಡುತ್ತೆ. ಹೀಗಾಗಿ ಜನರು ಇನ್ನು 2 ತಿಂಗಳ ಕಾಲ ಎಚ್ಚರಿಕೆಯಿಂದ ಇರಬೇಕು. ಜನತೆ ಕೆಮ್ಮು, ನೆಗಡಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೇ ತಕ್ಷಣ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿ ಎಂದು ಹೇಳಿದ್ದಾರೆ.