ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಯಾಸ್ ಇನ್ನಿಲ್ಲ

ಉಡುಪಿ: ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಯಾಸ್ (88) ಅವರು ಮಾ.24 ರ ತಡರಾತ್ರಿ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅವರ ಅಂತಿಮ ಸಂಸ್ಕಾರ ಮಾ.28 ರಂದು ಮಧ್ಯಾಹ್ನ 3.30 ಕ್ಕೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ. ಇನ್ನು ಇವರು, ಇವರು ಕಳೆದ ಎರಡು ದಶಕಗಳಿಂದ ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.

ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದನೆ, ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಅವರ ಪಾತ್ರ, ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಅವರು ನಡೆಸಿದ ಹೋರಾಟಗಳು ಹೀಗೆ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಮಾಡಿದ್ದಾರೆ. ಅಲ್ಲದೆ ಇವರು ರೈಲ್ವೆಗೆ ಸಂಬಂಧಿಸಿದ ಹೋರಾಟಗಳು ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲೂ ಸಾಮಾಜಿಕ ಕಳಕಳಿ ಹೊಂದಿದ್ದರು.

Leave a Reply

Your email address will not be published. Required fields are marked *

error: Content is protected !!