ಉಡುಪಿ: ಮಾ.27 ‘ಮಾಂಡವಿ ಪ್ರಿನ್ಸ್ ಪ್ಯಾಲೇಸ್’ ರೆಸಿಡೆನ್ಸಿಯಲ್ ಅಪಾರ್ಟ್ಮೆಂಟ್’ನ E-ಟವರ್ ಉದ್ಘಾಟನೆ

ಉಡುಪಿ : ನಗರದ ಕಲ್ಸಂಕ – ಗುಂಡಿಬೈಲು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಾಂಡವಿ ರಿಯಲ್ ಎಸ್ಟೇಟ್ ಡೆವಲಪರ್ಸ್ ಸಂಸ್ಥೆ ನಿರ್ಮಿಸಿರುವ ‘ಮಾಂಡವಿ ಪ್ರಿನ್ಸ್ ಪ್ಯಾಲೇಸ್’ ರೆಸಿಡೆನ್ಸಿಯಲ್ ಅಪಾರ್ಟ್‍ಮೆಂಟ್’ನ  ಇ-ಟವರ್ ಉದ್ಘಾಟನೆ ಮಾ. 27 ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಹಿರಿಯ ಧರ್ಮಗುರುಗಳಾದ ವಂ. ಗಾಡ್ಫ್ರಿ ಸಲ್ಡಾನ್ಹ ಮಂಗಳೂರು, ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್‍ನ ಧರ್ಮಗುರು ವಂ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಆಶೀರ್ವಚನ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಅತಿಥಿತಿಗಳಾಗಿ ಶಾಸಕ ಕೆ. ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಗರಸಭೆ ಸದಸ್ಯ ಸಂತೋಷ್ ಜತ್ತನ್ನ ಉಜ್ವಲ್ ಡೆವಲಪರ್ಸ್‍ನ  ಪುರುಷೋತ್ತಮ ಪಿ. ಶೆಟ್ಟಿ, ಬಡಗಬೆಟ್ಟು ಕ್ರೆಡಿಟ್ ಕೋ-ಆಪ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿದ್ದಾರೆ ಎಂದು ಮಾಂಡವಿ ಬಿಲ್ಡರ್ಸ್ ನ ಪ್ರಕಟನೆ ತಿಳಿಸಿದೆ.

ಉಡುಪಿ ಜಿಲ್ಲೆಯ ಅಭಿವೃದ್ದಿಗೆ ತನ್ನದೇ ಕೊಡುಗೆ ನೀಡುತ್ತಿರುವ ಮಾಂಡವಿ ರಿಯಲ್ ಎಸ್ಟೇಟ್ ಡೆವಲಪರ್ಸ್ ಕಳೆದ 25 ವರ್ಷಗಳಿಂದ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಇದೀಗ ಪ್ರಸ್ತುತ ವರ್ಷ ಬೆಳ್ಳಿ ಹಬ್ಬವನ್ನು ಆಚರಿಸುತ್ತಿದೆ. ಅಲ್ಲದೆ ಈ ಸಂಸ್ಥೆಯ ವತಿಯಿಂದ ಕಲ್ಸಂಕದಲ್ಲಿ ಮಾಂಡವಿ ಟೈಮ್ಸ್ ಸ್ಕ್ವ್ಯಾರ್ , ಸಂತೆಕಟ್ಟೆಯಲ್ಲಿ ಮಾಂಡವಿ ಕಾಸಾ ಗ್ರಾಂಡ್ ಸಮುಚ್ಚಯಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ. 

ಬುಕ್ಕಿಂಗ್ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್  www.mandavibuilders.com  ಅನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!